ರಾಜರಾಜೇಶ್ವರಿ ನಗರ ಜಂಟಿ ಆಯುಕ್ತರ ನವೀಕೃತ ಕಚೇರಿಯನ್ನು ಶಾಸಕ ಮುನಿರತ್ನ ಉದ್ಘಾಟಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಮಳೆ ನೀರು ಪರಿಹಾರ ಮತ್ತು ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನಿಧಿ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಕೋವಿಡ್ ನಿಂದಾಗಿ ಕನಿಷ್ಠವೆಂದರೂ 4 ಲಕ್ಷ ಜನ ಮರಣ ಹೊಂದಿದ್ದಾರೆ, ಕುಟುಂಬಗಳಲ್ಲಿ ದುಡಿಯುವ ಸದಸ್ಯರುಗಳನ್ನು ಕಳೆದುಕೊಂಡು ಕುಟುಂಬಗಳು ಅನಾಥವಾಗಿವೆ ಎಂದರು. ಇಂತಹ ನಿರಾಶ್ರಿತರಿಗೆ ರಾಜ್ಯ ಸರ್ಕಾರ ಪರಿಹಾರ ಒದಗಿಸುವಲ್ಲಿ ಸಾಕಷ್ಟು ಸಹಕಾರಿಯಾಗಿದೆ ಎಂದರು. ಈ ಸಂದರ್ಭದಲ್ಲಿ R.R ನಗರ ವಲಯ ಆಯುಕ್ತ ಬಾಬು ರೆಡ್ಡಿ, ಜಂಟಿ ಆಯುಕ್ತರಾದ ನಾಗರಾಜ್, ನಗರ ಜಿಲ್ಲಾಧಿಕಾರಿ ಮಲ್ಲಿಕಾರ್ಜುನ್, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಮೋಹನ್ ಕುಮಾರ್, ಮಂಜುನಾಥ್, ವಾರ್ಡ್ ಬಿಜೆಪಿ ಅಧ್ಯಕ್ಷೆ ಶ್ರೀಮತಿ ಸವಿತಾ ಭಟ್, ಮುಖಂಡರಾದ ವಿ.ಸಿ.ಚಂದ್ರು ಮುಂತಾದವರು ಉಪಸ್ಥಿತರಿದ್ದರು.

