ಬೆಂಗಳೂರು:- ಡಿಕೆ ಬ್ರದರ್ಸ್ ವಿರುದ್ಧ ಮುನಿರತ್ನ ನೇರಾನೇರ ಆರೋಪ ಮಾಡಿದ್ದಾರೆ. ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್, ಡಿಕೆ ಶಿವಕುಮಾರ್ ಅವರ ಕಡೆಯವರಿಂದ ನನ್ನ ಮೇಲೆ ಆಸೀಡ್ ದಾಳಿ ನಡೆದಿದೆ ಎಂದರು.
ಈ ಸರ್ಕಾರ ಸಂಪೂರ್ಣ ಪೊಲಿಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ:ಬಸವರಾಜ ಬೊಮ್ಮಾಯಿ!
ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದಾಗ ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ. ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದೆ. ಕೂಡಲೇ ಪೊಲೀಸರು ಮೊಟ್ಟೆ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿಕೆ ಸುರೇಶ್ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆ ಇದೆ. ಈ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆದಿದೆ ಎಂದು ದೂರಿದರು.
ಇದು ಕಾಂಗ್ರೆಸ್ ಪ್ರೇರಿತ ಕೃತ್ಯವಾಗಿದ್ದು ಡಿಕೆ ಸುರೇಶ್, ಡಿಕೆ ಶಿವಕುಮಾರ್, ಕುಸುಮ ತಂದೆ ಹನುಮಂತರಾಯಪ್ಪ ಇದಕ್ಕೆ ನೇರ ಹೊಣೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ಕಲವರು ಮನೆಯ ಮುಂದೆಯೇ ಬಂದು ರಾಜೀನಾಮೆ ಕೊಡಿ. ಇಲ್ಲದೇ ಇದ್ದರೆ ನಿಮ್ಮನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ತಿಳಿಸಿದರು.