ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ದರ್ಶನ್ ಪರ ವಕೀಲರು ವಾದ ಮಂಡಿಸಲಿದ್ದಾರೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಅ. 22ಕ್ಕೆ ಅರ್ಜಿ ವಿಚಾರಣೆಗೆ ಬಂದಾಗ, ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸುವಂತೆ ಬಳ್ಳಾರಿ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ದರ್ಶನ್ ಬೆನ್ನುಹುರಿ ನೋವಿನಿಂದ ಬಳಲು ತ್ತಿದ್ದಾರೆ. ಅವರಿಗೆ ಬಳ್ಳಾರಿಯ “ವಿಜಯನಗರ ವೈದ್ಯಕೀಯ ಸಂಸ್ಥೆ’ನಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ.
ಹೀಗಾಗಿ, ವೈದ್ಯಕೀಯ ಮತ್ತು ಆರೋಗ್ಯದ ಕಾರಣಕ್ಕಾಗಿ ಜಾಮೀನು ನೀಡಬೇಕು ಎಂದು ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ನ್ಯಾಯಾಲಯವನ್ನು ಕೋರಿದ್ದರು. ಹೀಗಾಗಿ ಇಂದು ಜಾಮೀನು ಸಿಗುತ್ತಾ ಕಾದು ನೋಡಬೇಕಾಗಿದೆ.