ಬೆಂಗಳೂರು:- ಅಮೃತಹಳ್ಳಿ ಇಬ್ಬರು ಅಪ್ರಾಪ್ತ ಬಾಲಕಿಯರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಿಭಾಗ ಡಿಸಿಪಿ ಸುಜೀತ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮಧ್ಯಾಹ್ನ ಮೂರುವರೇ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಮಕ್ಕಳನ್ನು ಮಲತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಮಕ್ಕಳ ತಂದೆ ಅನಿತಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡ್ತಾರೆ. ಮಲ ತಂದೆ ಸುಮಿತ್ ಪುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಾರೆ.
ಉತ್ತರ ಪ್ರದೇಶ ಮೂಲದ ಕುಟುಂಬವು, ಯಾವ ಕಾರಣಕ್ಕೆ ಕೊಲೆಯಾಗಿದೆ ಅನ್ನೋದು ತನಿಖೆ ನಡೆಸಬೇಕಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.