ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ: ಚಾಕುವಿನಿಂದ ಇರಿದು ಪೂಜಾರಿಯ ಬರ್ಬರ ಕೊಲೆ!

ಹುಬ್ಬಳ್ಳಿ: ನವನಗರ ಪೊಲೀಸ್​​ ಠಾಣಾ ವ್ಯಾಪ್ತಿಯ ಈಶ್ವರ ನಗರದಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪೂಜಾರಿಯನ್ನು ಹತ್ಯೆಗೈದಿರುವಂತಹ ಘಟನೆ ನಡೆದಿದೆ. Sameer Nigam: ಕೊನೆಗೂ ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ! ಪೂಜಾರಿ ದೇವಪ್ಪಜ್ಜ ಸಾವನ್ನಪ್ಪಿದ್ದವ್ಯಕ್ತಿ. ಕಳೆದ ಒಂದು ವರ್ಷದ ಹಿಂದೆ ಕೂಡ ಸ್ವಾಮೀಜಿ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ಅಂದು ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಇಂದು ಸಾವನ್ನಪ್ಪಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನವನಗರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.