ಬೆಂಗಳೂರು: ವಿಧಾನಸೌಧದ (Vidhana Soudha) ಮುಂಭಾಗದಲ್ಲೇ ಮುಸ್ಲಿಂ ಕುಟುಂಬವೊಂದು (Muslim family) ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ಜೆಜೆಆರ್ ನಗರದ ನಿವಾಸಿ ಶಾಯಿಸ್ತಾ ಬಾನು (48) ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಲೆ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ದಂಪತಿಗಳ ನಡುವೆ ತಳ್ಳಾಟ, ನೂಕಾಟವೂ ನಡೆದಿದೆ. ಕೊನೆಗೆ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ದಂತಪತಿಗಳನ್ನ ತಡೆದಿದ್ದಾರೆ.
ಆರೋಪ ಏನು?
ಆತ್ಮಹತ್ಯೆಗೆ ಯತ್ನಿಸಿದ ಶಾಯಿಸ್ತಾ ದಂಪತಿಗೆ ಸೇರಿದ 3 ಕೋಟಿ ರೂ. ಬಿಲ್ಡಿಂಗ್ ಅನ್ನು ಕೇವಲ 1.41 ಕೋಟಿ ರೂ.ಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಬೇಕು. ಕಳೆದ ಎರಡು ವರ್ಷಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ (zameer ahmed khan) ಅವರ ಮನೆಗೆ ಅಲೆಯುತ್ತಿದ್ದೇವೆ. ನಮಗೆ ಜಮೀರ್ ಅವರು ನ್ಯಾಯ ಕೊಡಿಸಿಲ್ಲ ಎಂದು ದಂಪತಿ ಆರೋಪಿಸಿದ್ದಾರೆ.