ಹಾಸನ:– ಹೊಳೆನರಸೀಪುರ ನರ್ಸಿಂಗ್ ಕಾಲೇಜು ಮುಸ್ಲಿಂ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ ಕಂಡಿದೆ.
ಸಭೆ ಬಳಿಕ ಜಮ್ಮು-ಕಾಶ್ಮೀರದಿಂದ ಬಂದಿರುವ ಮುಸ್ಲಿಂ ವಿದ್ಯಾರ್ಥಿ ಉಮರ್ ಮಾತನಾಡಿ, ಈ ವಿಷಯವನ್ನು ಇಲ್ಲಿಗೆ ಕೈ ಬಿಡುತ್ತಿದ್ದೇವೆ ಎಂದು ಹೇಳಿದರು.
ಮನೆಯಲ್ಲಿನ ವೈಫೈ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲವೇ? ಹಾಗಿದ್ರೆ ಈ ಸುಲಭ ಟ್ರಿಕ್ ಫಾಲೋ ಮಾಡಿ!
ಹೊಳೆನರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಸೂಚನೆಯಂತೆ ನಡೆದುಕೊಳ್ಳುತ್ತೇವೆ. ಕಾಲೇಜು ನಿಯಮದಂತೆ ಶಿಸ್ತಿನಿಂದ ಇರಬೇಕೆಂದು ಹೇಳಿದರು. ಮುಂದೆ ನಿಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಆಗುವುದಿಲ್ಲ ಎಂದಿದ್ದಾರೆ. ಈ ವಿಷಯವನ್ನು ಇಲ್ಲಿಗೆ ಕೈ ಬಿಡುತ್ತಿದ್ದೇವೆ ಎಂದರು.
ಗಡ್ಡ ತೆಗೆಯಬೇಕೆಂಬ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿಬಂದಿರುವ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಮೇಲೆ ಯಾರೂ ಒತ್ತಡ ಹೇರಿಲ್ಲ. ಶಿಸ್ತಿನ ವಿಚಾರದಲ್ಲಿ ಗಡ್ಡ ಟ್ರಿಮ್ ಮಾಡಲು ಹೇಳಿದ್ದರು. ಗಡ್ಡದ ವಿಚಾರ ಬಿಟ್ಟರೆ ಬೇರೆ ಏನೂ ಸಮಸ್ಯೆ ಆಗಿಲ್ಲ. ತಾರತಮ್ಯ ಮಾಡಿರುವ ಬಗ್ಗೆ ಯಾವುದೇ ವಿಚಾರ ಇಲ್ಲ. ಈಗ ಸಮಸ್ಯೆ ಬಗೆ ಹರಿದಿದೆ, ಏನೂ ಸಮಸ್ಯೆ ಇಲ್ಲ. ನಮ್ಮ ಸಂಪ್ರದಾಯ ಪಾಲನೆಗೆ ಅಡ್ಡಿ ಇಲ್ಲ ಎಂದು ತಿಳಿಸಿದರು.