ಬೆಂಗಳೂರು:- SSLC ವಿದ್ಯಾರ್ಥಿಗಳೇ ಇದು ನೀವು ಗಮನದಲ್ಲಿಟ್ಟುಕೊಂಡು ನೋಡಲೇಬೇಕಾದ ಸ್ಟೋರಿ ಇದು.
ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಮಧ್ಯವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.
ಮೆಟ್ರೋ ಹಳದಿ ಮಾರ್ಗ ತಪಾಸಣೆ ಮಾಡಿದ ಲಕ್ನೋನ ಆರ್ಡಿಎಸ್ಓ ಅಧಿಕಾರಿಗಳು!
ಮಧ್ಯವಾರ್ಷಿಕ ಪರೀಕ್ಷೆಗೂ ಪ್ರಶ್ನಿ ಪತ್ರಿಕೆ ರೂಪಿಸಿ ಆನ್ಲೈನ್ ಮೂಲಕ ರವಾನಿಸುವ ಮಹತ್ವದ ನಿರ್ಧಾರ ಮಾಡಿದೆ. ಮಧ್ಯವಾರ್ಷಿಕ ಪರೀಕ್ಷೆಗಳಿಗೆ ಕೆಲವೇ ದಿನಗಳು ಬಾಕಿ ಇದೆ. ಈ ಸಮಯದಲ್ಲಿ ಇಲಾಖೆಯ ಈ ನಿರ್ಧಾರಕ್ಕೆ ಮುಂದಾಗಿರುವುದು ಹಲವರ ವಿರೋಧಕ್ಕೆ ಕಾರಣವಾಗಿದೆ.
ಈ ವರ್ಷ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ sslc ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಮಂಡಳಿ ಹಂತದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ ಶಾಲೆಗಳಿಗೆ ಲಾಗಿನ್ ನೀಡಲು ಮುಂದಾಗಿದೆ. ಆದ್ರೆ, ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆ ಮುದ್ರಣಕ್ಕೆ ಯಾವುದೇ ಅನುದಾನ ಶಾಲೆಗಳಿಗೆ ನೀಡಿಲ್ಲ. ಶಿಕ್ಷಕರು ಹಾಗೂ ಶಾಲೆಗಳ ಹೆಗಲಿಗೆ ಈ ಖರ್ಚು ಹಾಕಿ ಇಲಾಖೆ ಸುಮ್ಮನಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ದಾನಿಗಳ ಮೊರೆ ಹೋಗಬೇಕಾದ ಸ್ಥಿತಿ ಸರ್ಕಾರಿ ಶಾಲಾ ಶಿಕ್ಷಕರಿಗೆ ಎದುರಾಗಿದೆ.
ಶಿಕ್ಷಕರ ಪರೀಕ್ಷೆಗೂ ಮೊದಲು ಇದನ್ನ ಪ್ರಿಂಟ್ ಮಾಡಿಸಿ ವಿದ್ಯಾರ್ಥಿಗಳಿಗೆ ನೀಡಬೇಕಾಗಿದೆ. ಸದ್ಯ ಇದಕ್ಕೆ ಯಾವುದೇ ಅನುದಾನ ನೀಡಿಲ್ಲ. ಒಬ್ಬ ವಿದ್ಯಾರ್ಥಿಗೆ 6 ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಿದ್ಧಪಡಿಸಿ ನೀಡಲು ಕನಿಷ್ಠ 50 ರಿಂದ 60 ರೂಪಾಯಿ ಖರ್ಚಾಗುತ್ತದೆ. ಆದ್ರೆ ಇಲಾಖೆ ಇದಕ್ಕೆ ಅನುದಾನ ನೀಡದೇ ಏಕಾಏಕಿ ಈ ರೀತಿ ನಿರ್ಧಾರಕ್ಕೆ ಮುಂದಾಗಿರುವುದಕ್ಕೆ ವ್ಯಾಪಕ ವಿರೋಧಗಳು ವ್ಯಕ್ತವಾಗಿವೆ.