IPL ಸೀಸನ್ 17 ರಲ್ಲಿ ನಿರೀಕ್ಷೆಯಂತೆ ಆಡದೆ ಅಭಿಮಾನಿಗಳಿಗೆ ಬೇಸರ ಮೂಡಿಸಿರುವ ಬೆಂಗಳೂರು ತಂಡ 2 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ.
ಮಧುಮೇಹಿಗಳು ರಾತ್ರಿ ಹೀಗೆ ಮಾಡಿದ್ರೆ ಬೆಳಗಾಗುವಷ್ಟರಲ್ಲಿ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!
ಈ ನಡುವೆ ಆರ್ಸಿಬಿ ತಂಡ ಮಹತ್ವದ ಘೋಷಣೆ ಮಾಡಿದ್ದು, ಮುಂದಿನ ಪಂದ್ಯದಲ್ಲಿ ಹೊಸ ಶೈಲಿಯಲ್ಲಿ ಕಾಣಿಸಿಕೊಳ್ಳಲಿದೆ. ಅಂದರೆ ಪ್ರತಿ ಬಾರಿಯಂತೆ ಈ ಬಾರಿಯೂ ಆರ್ಸಿಬಿ ಒಂದು ಪಂದ್ಯದಲ್ಲಿ ಹಸಿರು ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತಿದೆ.
ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್ಸಿಬಿ ತನ್ನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಇದೇ ಏಪ್ರಿಲ್ 21 ರಂದು ಅಂದರೆ ಮುಂದಿನ ಭಾನುವಾರದಂದು ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಎದುರಿಸಲಿದೆ.
ವಾಡಿಕೆಯಂತೆ ಈ ಪಂದ್ಯದಲ್ಲಿ ಆರ್ಸಿಬಿ ತಂಡ ಗೋ ಗ್ರೀನ್ ಡೇ ಸಂಪ್ರದಾಯವನ್ನು ಮುಂದುವರಿಸಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ತಂಡ ಹಸಿರು ಜೆರ್ಸಿ ಧರಿಸಿ ಮೈದಾನಕ್ಕಿಳಿಯಲಿದೆ. ಈ ವಿಚಾರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ತನ್ನ ಅಭಿಮಾನಿಗಳಿಗೆ ಮಾಹಿತಿ ನೀಡಿದೆ.
ವಾಸ್ತವವಾಗಿ, 2011 ರ ಐಪಿಎಲ್ ಆವೃತ್ತಿಯಿಂದ ಆರ್ಸಿಬಿ ತಂಡ ಸೀಸನ್ನಲ್ಲಿ ಆಡುವ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ತನ್ನ ಅಭಿಮಾನಿಗಳಲ್ಲಿ ಸ್ವಚ್ಛ ಮತ್ತು ಹಸಿರು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್ಸಿಬಿ ಈ ಹಸಿರು ಜೆರ್ಸಿಯನ್ನು ಧರಿಸಲಿದೆ.
ಅದರಂತೆ ಈ ಬಾರಿಯೂ ಆರ್ಸಿಬಿ ತಂಡ ಕೆಕೆಆರ್ ವಿರುದ್ಧ ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡಲಿದೆ. ತಂಡದ ಹೊಸ ಜೆರ್ಸಿ ಸಾಕಷ್ಟು ಆಕರ್ಷಕವಾಗಿದೆ. ಈ ಜೆರ್ಸಿಯ ಟೀ ಶರ್ಟ್ನಲ್ಲಿ ಹಸಿರು ಮತ್ತು ನೀಲಿ ಬಣ್ಣಗಳನ್ನು ಬಳಸಲಾಗಿದೆ.