ಬೆಂಗಳೂರು:- ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ನನಗೆ ಯಾರದ್ದೂ ವಿರೋಧ ಇಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ತಮ್ಮ ಆಯ್ಕೆಗೆ ಯಾರ ವಿರೋಧವೂ ಇಲ್ಲ. ಭಾರತವನ್ನು ಶಕ್ತಿಶಾಲಿಯನ್ನಾಗಿಸಿ ಮುನ್ನಡೆಸಿಕೊಂಡು ಹೋಗುತ್ತಿರುವ ನೇಂದ್ರ ಮೋದಿ ಅವರು ಮೂರನೇ ಸಲಕ್ಕೆ ಪ್ರಧಾನಿಯಾಗಬೇಕು ಎಂದು ಗಣೇಶನಲ್ಲಿ ಪ್ರಾರ್ಥಿಸಿದ್ದೇನೆ, ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಹಿರಿಯರಿದ್ದರೂ ನನಗೆ ಕೇಂದ್ರದ ವರಿಷ್ಠಾಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ. ಎಲ್ಲರನ್ನೂ ವಿಶ್ಚಾಸಕ್ಕೆ ತೆಗೆದುಕೊಂಡು ಪಕ್ಷದ ಕೆಲಸ ಮಾಡಲಾಗುವುದು. ನನ್ನ ಆಯ್ಕೆ ಮೋದಿ, ಜೆ.ಪಿ.ನಡ್ಡಾ, ಅಮಿತ್ ಷಾ ಅವರ ತೀರ್ಮಾನವಾಗಿದ್ದು ಇದಕ್ಕೆ ಯಾರ ವಿರೋಧವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.