ವಿಜಯಪುರ:- ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
BBK11: ಬಿಗ್ ಬಾಸ್ ಟ್ರೋಫಿ ಮುಡಿಗೇರಿಸಿಕೊಂಡ ಹನುಮಂತ: ಇತಿಹಾಸದಲ್ಲೇ ಈ ರೀತಿ ನಡೆದದ್ದು ಇದೇ ಮೊದಲು!
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧ. ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದರು. ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ರೆಡಿ ಎಂದರು.
ಉಸ್ತುವಾರಿ ಸಭೆಗೆ ನಾನು ಹೋಗಿಲ್ಲ. ಅಲ್ಲಿ 600 ಶಾಸಕರ ಬೆಂಬಲ ಇದೆ, ಅಲ್ಲಿ ನಮಗೇನು ಕೆಲಸ. 600 ಶಾಸಕರು, 1,500 ಸಂಸದರು, 2,000 ಎಂಎಲ್ಸಿಗಳ ಬೆಂಬಲ ಇದೆ ಎಂದು ಯತ್ನಾಳ್ ವ್ಯಂಗ್ಯವಾಡಿದರು.