ಕೊಪ್ಪಳ: ಲೋಕಸಭಾ ಚುನಾವಣೆಗೆ (Loksabha Election) ನಾನಾಗಲಿ, ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ. ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ. ಅವರ ಹೆಸರುಗಳನ್ನು ಕೊಪ್ಪಳದ ಸಮಾವೇಶದಲ್ಲಿ ಘೋಷಣೆ ಮಾಡುತ್ತೇನೆ ಎಂದು ಶಾಸಕ ಜನಾರ್ದನ ರೆಡ್ಡಿ (Janardhan Reddy) ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಹಿನ್ನೆಲೆ ಜನವರಿ 11 ರಂದು ಕೊಪ್ಪಳದಲ್ಲಿ 6 ಜಿಲ್ಲೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 4 ರಿಂದ 6 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇನೆ. ಅವರನ್ನು ಗೆಲ್ಲಿಸಲು ಹಗಲು ರಾತ್ರಿ ಕೆಲಸ ಮಾಡುತ್ತೇನೆ ಎಂದಿದ್ದಾರೆ.
Apple ವಾಚ್ ಸೀರಿಸ್ 9, ವಾಚ್ ಅಲ್ಟ್ರಾ 2 ಮಾರಾಟ US ನಲ್ಲಿ ಸ್ಥಗಿತ: ಕಾರಣವೇನು?
ಬೇರೆ ಪಕ್ಷಗಳ ಜೊತೆಗೆ ಹೊಂದಾಣಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ (Vidhanasabha Election) ಯಾರ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೀಗಾಗಿ ಕೆಆರ್ ಪಿಪಿ (KRPP) ತನ್ನ ಇತಿಮಿತಿಗಳಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡುತ್ತದೆ. ಬೇರೆ ಪಕ್ಷಗಳ ಜೊತೆಗೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರು ಏನೇ ಮಾಡಿದರೂ ನನ್ನ ನಿರ್ಧಾರ ದೃಢವಾಗಿದೆ. ಕೆಆರ್ ಪಿಪಿ ಸ್ವತಃ ಬಲದ ಮೇಲೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ರೆಡ್ಡಿ ತಿಳಿಸಿದ್ದಾರೆ.