ನವದೆಹಲಿ:- ನನ್ನ ತಮ್ಮ ರಾಹುಲ್ ಹಿಂದೂ ವಿರೋಧಿ ಅಲ್ಲ ಎಂದು ಪ್ರಿಯಾಂಕ ಗಾಂಧಿ ಸ್ಪಷ್ಟನೆ ನೀಡಿದ್ದಾರೆ.
Breaking News: ಕೇಂದ್ರದ ನೂತನ ಕಾನೂನುಗಳಿಗೆ ತಿದ್ದುಪಡಿ ತರುತ್ತಾ ಸಿದ್ದು ಸರ್ಕಾರ..!
ಲೋಕಸಭೆಯಲ್ಲಿ ತಮ್ಮ ಮೊದಲ ಭಾಷಣ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ಮತ್ತು ಈ ಕುರಿತು ಕ್ಷಮೆ ಯಾಚಿಸುವಂತೆ ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ, “ನನ್ನ ಸಹೋದರ ರಾಹುಲ್ ಗಾಂಧಿ ಎಂದಿಗೂ ಹಿಂದೂಗಳ ವಿರುದ್ಧ ಮಾತನಾಡುವುದಿಲ್ಲ. ಅವರು ಆರ್ಎಸ್ಎಸ್ ಬಿಜೆಪಿ ನಾಯಕರ ಬಗ್ಗೆ ಮಾತನಾಡಿದ್ದಾರೆ. ಅದನ್ನು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದ್ದಾರೆ” ಎಂದರು.
ಇಂದು ಲೋಕಸಭೆಯಲ್ಲಿ ಶಿವನ ಫೋಟೋವನ್ನು ಹಿಡಿದು ಮಾತನಾಡಿದ್ದ ರಾಹುಲ್ ಗಾಂಧಿ, “ನಮ್ಮ ಮಹಾಪುರುಷರೆಲ್ಲರೂ ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಾರೆ. ನೀವು ಯಾವುದೇ ರೀತಿಯಲ್ಲಿ ಹಿಂದೂ ಅಲ್ಲ.” ಎಂದು ಬಿಜೆಪಿ ನಾಯಕರತ್ತ ಕೈ ತೋರಿಸಿ ಹೇಳಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿಯ, “ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಅತ್ಯಂತ ಗಂಭೀರವಾದ ಆರೋಪವಾಗಿದೆ” ಎಂದು ಹೇಳಿದ್ದರು.