ಮೈಸೂರು:- ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಅವರು ಟಿಕೆಟ್ ಘೋಷಣೆ ಬಳಿಕ ಇಂದು ಮೊದಲ ಸುದ್ದಿಗೋಷ್ಠಿ ನಡೆಸಿದರು.
ಪ್ರತಾಪ್ ಸಿಂಹ 10 ವರ್ಷ ಸಂಸದರಾಗಿದ್ದರು. ಅವರಿಗೇ ಟಿಕೆಟ್ ಸಿಗುತ್ತೆ ಅಂತ ನಾನು ಅಂದುಕೊಂಡಿದ್ದೆ. ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧೆ ಮಾಡಬೇಕು ಅಂತ ಪಟ್ಟು ಹಿಡಿದು ಟಿಕೆಟ್ ತೆಗೆದುಕೊಂಡು ಬಂದೆ. ಆದ್ರೆ ಪ್ರತಾಪ್ ಸಿಂಹ ಅವರಾಗಿ ಅವರೇ ಔಟ್ ಆಗಿಬಿಟ್ರು. ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದು ಯಾಕೆ? ಕಾರಣ ಏನು ಅಂತ ಬಿಜೆಪಿಯವರು ಹೇಳಬೇಕು. ಪ್ರತಾಪ್ ಸಿಂಹ ವಿರುದ್ಧ ಆಡಿಯೋ, ವಿಡಿಯೋ ಇತ್ತಾ? ಏನಾದರೂ ದಾಖಲೆಗಳಿದ್ದವೇ ಅಥವಾ ವರಿಷ್ಠರು ಕರೆದು ಹೇಳಿದ್ರ? ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಲು ಕಾರಣ ಏನು ಅಂತ ಇನ್ನೂ ಗೊತ್ತಾಗಿಲ್ಲ ಎಂದರು.
ನಾಲ್ಕು ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೇನೆ. ಈ ಹಿಂದೆ ಮತದಾರರು ನನ್ನನ್ನು ಕೈ ಹಿಡಿಯಲಿಲ್ಲ. ನಾನೇ ಸೂಕ್ತ ಅಭ್ಯರ್ಥಿ ಎಂದು ಪಕ್ಷ ನನಗೆ ಟಿಕೆಟ್ ಕೊಟ್ಟಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತರೆ ನಾನು ಸತ್ತಂತೆ ಎಂದು ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹೇಳಿದರು.