ಮೈಸೂರು: ಮುಡಾ ಹಗರಣ (MUDA Scam) ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ (K.V.Rajendra) ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ (Mysuru DC) ಲಕ್ಷ್ಮಿಕಾಂತ ರೆಡ್ಡಿ ಅವರನ್ನು ನಿಯೋಜಿಸಲಾಗಿದೆ. ರೆಡ್ಡಿ ಅವರು ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈಗ ಮೈಸೂರು ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ: ಇಲ್ಲಿನ 7 ಜಲಪಾತಗಳಿಗೆ ನಿರ್ಬಂಧ!
ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ವರ್ಗಾವಣೆಯಾಗಿರುವುದು ಚರ್ಚೆ ಹುಟ್ಟುಹಾಕಿದೆ. ರಾಜೇಂದ್ರ ಅವರು 2022ರ ಅ.27 ರಂದು ಡಿಸಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಎರಡು ವರ್ಷಕ್ಕೂ ಮುನ್ನವೇ ಅವರನ್ನು ವರ್ಗಾವಣೆ ಮಾಡಲಾಗಿದೆ.