ಮೈಸೂರು: ಟಿ.ನರಸೀಪುರದ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಸ್ಫೋಟಕ ವಸ್ತುಗಳನ್ನು ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್ನಲ್ಲಿ ಇಟ್ಟು ಹೋಗಿದ್ದರು. ಸ್ಥಳೀಯರು ಹಾಗೂ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ನೋಡಿದಾಗ ಸ್ಫೋಟಕ ವಸ್ತುಗಳು ಎಂದು ತಿಳಿದು ಬಂದಿದೆ. ಬಳಿಕ ಹೋಟೆಲ್ ಸಿಬ್ಬಂದಿ ಪ್ಲಾಸ್ಟಿಕ್ ಕವರ್ನ್ನು ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಭೇಟಿ ನೀಡಿ ಸ್ಫೋಟಕಗಳಿದ್ದ ಕವರ್ನ್ನು ಪರಿಶೀಲಿಸಿದ್ದಾರೆ. ಈ ವೇಳೆ ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ. ಸ್ಫೋಟಕ ವಸ್ತುಗಳು ಕಲ್ಲು ಗಣಿಗಾರಿಕೆಗೆ ಹಾಗೂ ನಾಡ ಬಾಂಬ್ ಕಾಡು ಪ್ರಾಣಿಗಳ ಬೇಟೆಗೆ ಬಳಕೆಗೆ ಬಳಸಲಾಗುವ ವಸ್ತುಗಳಂತೆ ಕಂಡುಬಂದಿವೆ.
ವಾರದಲ್ಲಿ ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಿದರೆ ಉತ್ತಮ.? ವೈದ್ಯರು ಹೇಳೋದು ಏನು ಗೊತ್ತಾ..?
ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಚಿರತೆ, ಹುಲಿ ದಾಳಿಯಿಂದ ಅನೇಕರು ಗಾಯಗೊಂಡಿದ್ದರೆ, ಕೆಲವರ ಪ್ರಾಣ ಪಕ್ಷಿ ಹಾರಿಹೋಗಿದೆ. ಇನ್ನು ಕೆಲವರು ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.