ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಸೈಟ್ ಹಂಚಿಕೆ ಆರೋಪದಡಿ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಮೈಸೂರು ತಾಲೂಕಿನ ಹಿನಕಲ್ ಗ್ರಾ.ಪಂ. ವ್ಯಾಪ್ತಿಯಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಹಿನಕಲ್ ಸರ್ವೇ ನಂಬರ್ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಮುಡಾದ 7.18 ಗುಂಟೆ ಜಮೀನಿನಲ್ಲಿ ನಿವೇಶನ ಮಾಡಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಹಂಚಿರುವ ಆರೋಪ ಕೇಳಿಬಂದಿದೆ.
ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿ ಆರ್ಟಿಐ ಕಾರ್ಯಕರ್ತ ಗಂಗರಾಜು 2017ರಲ್ಲಿ ದೂರು ನೀಡಿದ್ದರು. ಈ ಸಂಬಂಧ 2022ರಲ್ಲಿ ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡಿತ್ತು. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.