ಮೈಸೂರು:- ಜಾರಿ ನಿರ್ದೇಶನಾಲಯವು ಮುಡಾದ 160 ನಿವೇಶನಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.
ತನ್ನ ಆದೇಶ ಪ್ರತಿಯಲ್ಲಿ, 160 ನಿವೇಶನಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣ ವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಎಲ್ಲ ನಿವೇಶನಗಳನ್ನು ಜಪ್ತಿ ಮಾಡುವಂತೆ ಉಲ್ಲೇಖ ಮಾಡಿದೆ.
ಸರ್ಕಾರದ ಮಾರ್ಗಸೂಚಿ ಪ್ರಕಾರ ಒಂದು ನಿವೇಶನ ಮೌಲ್ಯ 81 ಕೋಟಿ ರೂ. ಇದೆ. ಮಾರುಕಟ್ಟೆ ದರ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯವಿದೆ. ರವಿ ಎಂಬುವರ ಹೆಸರಲ್ಲಿ 31 ನಿವೇಶನ, ಅಬ್ದುಲ್ ವಾಹಿದ್ ಎಂಬುವರ ಹೆಸರಲ್ಲಿ 41 ನಿವೇಶನ, ಕ್ಯಾಥಡ್ರಾಲ್ ಸೊಸೈಟಿ ಹೆಸರನಿಲ್ಲಿ 40 ನಿವೇಶನ, ಇತರರಿಗೆ ಸೇರಿದ 48 ನಿವೇಶನಗಳನ್ನು ಜಪ್ತಿ ಮಾಡುವಂತೆ ಹೇಳಿದೆ.