ಮೈಸೂರು;- ಮೈಸೂರು ನಗರಪಾಲಿಕೆ ಚುನಾವಣೆ ತಡ ಮಾಡುವುದಿಲ್ಲ ಎಂದು ಸಚಿವ ಬಿ.ಎಸ್. ಸುರೇಶ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಮೈಸೂರು ಮಹಾನಗರಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಲಾಗುವುದು. ಈ ವಿಷಯದಲ್ಲಿ ತಡ ಮಾಡುವ ಪ್ರಶ್ನೆಯೇ ಇಲ್ಲ’ ಎಂದರು.
ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಚುನಾವಣೆ ನಡೆಸಲು ಉತ್ಸುಕರಾಗಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆಗೂ ಪಾಲಿಕೆ ಚುನಾವಣೆ ನಡೆಸುವುದಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಪಾಲಿಕೆ ಚುನಾವಣೆ ಮೀಸಲಾತಿ ಬಗ್ಗೆಯೂ ಈಗಾಗಲೇ ಪ್ರಕ್ರಿಯೆ ಶುರುವಾಗಿದೆ. ನಮಗೆ ಚುನಾವಣೆ ಪ್ರಕ್ರಿಯೆ ನಡೆಸಲು 15 ದಿನ ಸಾಕು’ ಎಂದರು.
‘ಮೈಸೂರು-ಬೆಂಗಳೂರನ್ನು ಅವಳಿ ನಗರಗಳಾಗಿ ಪರಿಗಣಿಸಿ ಅಭಿವೃದ್ಧಿಪಡಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿಯೇ ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಬೆಂಗಳೂರಿನಿಂದಾಚೆಗಿನ ನಗರಗಳು ಬೆಳೆಯಬೇಕು ಎಂಬುದು ನಮ್ಮ ಆಶಯವಾಗಿದೆ’ ಎಂದರು.