ಮೈಸೂರು: 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ (Padma Awards 2024) ಆಯ್ಕೆಯಾಗಿರುವವರ ಪಟ್ಟಿ ಗುರುವಾರ ಪ್ರಕಟಗೊಂಡಿದೆ. ಕರ್ನಾಟಕದ ಇಬ್ಬರು ಸೇರಿ ಒಟ್ಟು 34 ಮಂದಿಯನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹಾಗೆ ಮೈಸೂರಿನ ಆದಿವಾಸಿ ಮುಖಂಡನಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಮೊತ್ತ ಹಾಡಿಯ ನಿವಾಸಿ. ಜೇನು ಕುರುಬ ಸಮುದಾಯದ ಸೋಮಣ್ಣನಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
ಸೋಮಣ್ಣ: ಮೈಸೂರಿನ ಬುಡಕಟ್ಟು ಕಲ್ಯಾಣ ಕಾರ್ಯಕರ್ತ ಸೋಮಣ್ಣ ಅವರು 4 ದಶಕಗಳಿಂದ ಜೇನು ಕುರುಬ ಜನಾಂಗದ ಉನ್ನತಿಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಸಮಾಜಕಾರ್ಯ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ.