ಕೊಡಗು:- ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಗೆ ಜನಿಸಿದ್ದ ನವಜಾತ ಶಿಶು ನಿಗೂಢ ನಾಪತ್ತೆ ಆಗಿರುವಂತಹ ಘಟನೆ ಜರುಗಿದೆ.
ಹೆರಿಗೆಯಾಗಿ 4 ದಿನ ಕಳೆದರೂ ನವಜಾತ ಶಿಶು ಪತ್ತೆಯಾಗಿಲ್ಲ. ತಾಯಿಯೇ ಮಗುವನ್ನು ನಾಪತ್ತೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಹೆರಿಗೆ ನಂತರ ಚಿಕಿತ್ಸೆ ಇಲ್ಲದೆ ಬಾಲಕಿ ಸ್ಥಿತಿ ಗಂಭೀರವಾಗಿತ್ತು. ಆರೋಗ್ಯ ಹದಗೆಟ್ಟ ನಂತರ ಅಧಿಕಾರಿಗಳು ಬಾಲಕಿಯನ್ನು ತಡವಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ನವಜಾತ ಶಿಶು ಹುಡುಕದೆ ಅಧಿಕಾರಿಗಳು ಮತ್ತು ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಬಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.