ಮೈಸೂರು:- ಇಂದಿನಿಂದ 9 ದಿನಗಳ ಕಾಲ ಮೈಸೂರು ನಗರ ಸ್ವರ್ಗದಂತೆ ಕಂಗೊಳಿಸುತ್ತದೆ. ಇದಕ್ಕೆ ಕಾರಣ ಇವತ್ತಿನಿಂದ ಆರಂಭವಾಗುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವಿದ್ದು, ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು.
Navratri 2024: ನವರಾತ್ರಿಯ 9 ದಿನಗಳು ಯಾವ ಬಣ್ಣದ ಬಟ್ಟೆಯನ್ನು ಧರಿಸಬೇಕು ಇಲ್ಲಿದೆ ನೋಡಿ!
ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.. ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಜೋರಾಗಿದೆ. ಉದ್ಘಾಟನೆಗೆ ಭಕ್ತರಿಗೂ ಅವಕಾಶ ನೀಡಲಾಗಿದೆ. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದಾರೆ.