ಹುಬ್ಬಳ್ಳಿ: ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿಗೆ ಟಾಂಗ್ ಕೊಟ್ಟರು. ನಗರದಲ್ಲಿ ಮಾತನಾಡಿದ ಅವರು, ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ,
ಬೈಬಲ್ ಮೇಲೆಯೂ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಎನ್ನಲಿ, ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ. ಸರ್ಕಾರಗಳು ನಡೆಯೋದು ಸಂವಿಧಾನದ ಮೇಲೆ ಎಂದು ತಿಳಿಸಿದರು.
ಹೆಚ್ಚುತ್ತಲೇ ಇದೆ PM ಮೋದಿ ಕ್ರೇಜ್ – 2 ಕೋಟಿ ಚಂದಾದಾರರ ಸಂಖ್ಯೆ ದಾಟಿತು ಯೂಟ್ಯೂಬ್ ಚಾನೆಲ್
ಬಸವ ತತ್ವ, ಅಂಬೇಡ್ಕರ್ ತತ್ವದ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೀತಿತ್ತು. ಪೀಠದ ಮೇಲೆ ಕುಳಿತು ಕಾಗೇರಿ ನಾನು ಆರ್ಎಸ್ಎಸ್ನವರು ಎಂದಿದ್ದರು. ಬಿಜೆಪಿಯವರು ಹಣದ ಮೇಲೆ ಹೆಣ ಮಾಡಿದ್ದಾರೆ. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೂ ಹಣ ಮಾಡಿದ್ದಾರೆ ಎಂದು ಆರೋಪಿಸಿದರು.