ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಶಾಸಕ ಎನ್ ಎ ಹ್ಯಾರಿಸ್ ಅವರು ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಶಾಸಕರ ಅನುದಾನದ ಅಡಿಯಲ್ಲಿ ಶಾಂತಿನಗರ ಕ್ಷೇತ್ರದಲ್ಲಿ ಕೋವಿಡ್ ನಿಂದ ಮೃತಪಟ್ಟ ವಾರಸುದಾರರಿಗೆ ಶಾಸಕ ಎನ್ ಎ ಹ್ಯಾರಿಸ್ ಅವರು ಪರಿಹಾರ ವಿತರಣೆ ಮಾಡಿದ್ದಾರೆ.
ಬಳಿಕ ಮಾತನಾಡಿದ ಅವರು, ಮಹಾಮಾರಿ ಕೊರೊನಾ ಗೆ ಬಲಿಯಾದ ಮೃತರ ನೆನಪು ಕಣ್ಣಲ್ಲಿ ನೀರು ತರಿಸಿದೆ. ಇದು ಅವರ ಕುಟುಂಬದವರಿಗೆ ಮರೆಯಲಾಗದ ನೋವು. ಹೀಗಾಗಿ ರಾಜ್ಯ ಸರ್ಕಾರ ಮೃತ ಕುಟುಂಬಗಳಿಗೆ ಇಂತಿಷ್ಟು ಹಣವನ್ನು ನೀಡುತ್ತಿದ್ದು, ಹೀಗಾಗಿ ಇಂದು ಕ್ಷೇತ್ರದಲ್ಲಿ ಮರಣ ಹೊಂದಿದ ಬಿಪಿಎಲ್ ಕುಟುಂಬಗಳಿಗೆ ತಲಾ 1,50,000 ಪರಿಹಾರ ವಿತರಣೆ ಮಾಡಲಾಗುತ್ತಿದೆ ಎಂದು ಎನ್ ಎ ಹ್ಯಾರಿಸ್ ಹೇಳಿಕೆ ನೀಡಿದ್ದಾರೆ.
