ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕನ್ನಡದ ಕವಿ, ನಾಟಕಗಾರ, ವಿಮರ್ಶಕ, ಚಂಪಾ ಎಂದೇ ಪ್ರಖ್ಯಾತರಾಗಿದ್ದ ಚಂದ್ರಶೇಖರ್ ಪಾಟೀಲ್ ಅವರ ನಿಧನದ ವಿಷಯ ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದು ಕೊಂಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕೊಟ್ಟು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಬಿ ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
