ಮಂಡ್ಯ:- ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪಡದಿ ಟೌನ್ ಇನ್ಸ್ಪೆಕ್ಟರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ ವಿದೇಶಿ ಪ್ರಜೆ ವಿರುದ್ಧ FIR!
ನಾಗಮಂಗಲ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಿದ್ದಾರೆ.
ಇನ್ನೂ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದು ನಾಗಮಂಗಲ ಪಟ್ಟಣ ಹೊತ್ತಿ ಉರಿದಿತ್ತು. ಕರ್ತವ್ಯ ಲೋಪ, ನಿರ್ಲಕ್ಷತನ ಹಿನ್ನೆಲೆಯನ್ನು ಇನ್ಸ್ಪೆಕ್ಟರ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.