ಮಂಡ್ಯ:- ನಾಗಮಂಗಲದ ನೆಮ್ಮದಿ ಕೆಡಿಸಿದ 150 ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 52 ಜನರನ್ನ ಬಂಧಿಸಿ ಜೈಲಿಗೆ ಅಟ್ಟಲಾಗಿದೆ. ತಲೆಮರೆಸಿಕೊಂಡ 97 ಗಲಭೆಕೋರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಕರ್ನಾಟಕದಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ಬೆಂಗಳೂರು ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್ ಶುರು!
ನಾಗಮಂಗಲ ಗಲಭೆ ಕೇಸಲ್ಲಿ ಈವರೆಗೆ 150 ಆರೋಪಿಗಳ ಪೈಕಿ 52 ಜನರ ಹೆಸರು, ವಿಳಾಸ ಪತ್ತೆ ಹಚ್ಚಿ ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 109, 115, 118, 121, 132, 189, 190 ಸೇರಿದಂತೆ ಒಟ್ಟು 16 ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಲಾಗಿದೆ. 30 ಮಂದಿ ಮುಸ್ಲಿಮರು, 23 ಹಿಂದೂಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಲೆಮರೆಸಿಕೊಂಡ 97 ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತ 52 ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹಿರಿಯ ಸಿವಿಲ್ ನ್ಯಾಯಾಧೀಶರು ಆದೇಶಿಸಿದ್ದಾರೆ. ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನ ಶಿಫ್ಟ್ ಮಾಡಲಾಗಿದೆ.