ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ನಾಗೇಂದ್ರ ಬಂಧನ ವಿಚಾರವಾಗಿ ಗೃಹಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು. ತನಿಖೆಗೆ ನಮ್ಮ ತಕರಾರಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,
ಇಡಿಯವರುತನಿಖೆ ನಡೆಸುತ್ತಿದ್ದಾರೆ. ಅವರಿಗೆ ಏನು ಮಾಹಿತಿ ಸಿಕ್ಕಿದೆಯೋ ಆ ಆಧಾರದಲ್ಲಿ ಬಂಧಿಸಿದ್ದಾರೆ. ಇದು ಕಾನೂನಿನ ಪ್ರಕಾರ ನಡೆಯುವ ಪ್ರಕ್ರಿಯೆ. ಆದರೆ ಇದನ್ನು ರಾಜಕೀಯವಾಗಿ ಬಳಸಬಾರದು. ಸಿಐಡಿ ತನಿಖೆ ನಡೆಯುತ್ತಿತ್ತು. ಪ್ರಕರಣದಲ್ಲಿ ಇದ್ದಕ್ಕಿದ್ದಂತೆ ಇಡಿ ಪ್ರವೇಶ ಆಗಿದೆ ಎಂದರು. ಇಡಿ ಬಂಧನದಿಂದ ತಪ್ಪಿಸಿಕೊಂಡು ಶಾಸಕ ದದ್ದಲ್ ಓಡಾಡುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ,
Vaastu Tips: ಮನೆಯೊಳಗೆ ಪೊರಕೆಯನ್ನು ಹೀಗೆ ಇಟ್ಟರೆ ಲಕ್ಷ್ಮಿ ಕೃಪೆ ಸಿಗುತ್ತಂತೆ!
ನಮ್ಮ ಎಸ್ಐಟಿಯವರು ನಾಗೇಂದ್ರ, ದದ್ದಲ್ ಇಬ್ಬರನ್ನೂ ಕರೆದು ವಿಚಾರಣೆ ಮಾಡಿದ್ದಾರೆ. ಅಗತ್ಯ ಕಂಡುಬಂದರೆ ಮತ್ತೆ ಕರೆಯುತ್ತಾರೆ. ದದ್ದಲ್ ಅವರು ಎಲ್ಲಿಗೂ ತಪ್ಪಿಸಿಕೊಂಡು ಹೋಗಿಲ್ಲ. ಇಲ್ಲೇ ಎಲ್ಲೋ ಅವರ ಕುಟುಂಬದವರ ಜೊತೆ ಇದ್ದಾರೆ. ಶುಕ್ರವಾರವೂ ನಾನು ದದ್ದಲ್ ಬಗ್ಗೆ ಕೇಳಿದಾಗ ಅವರು ಇಲ್ಲೇ ಅವರ ಕುಟುಂಬದವರ ಜೊತೆ ಇದ್ದಾರೆ ಎಂದು ಹೇಳಿದ್ದಾರೆ. ಎಸ್ಐಟಿಯವರೇ ಬಂಧನ ಮಾಡಲಿ ಅಂತ ಸಿಐಡಿ ಕಚೇರಿಗೆ ದದ್ದಲ್ ಹೋಗಿದ್ದ ವಿಚಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.