ಬೆಂಗಳೂರು:- ಪ್ರಧಾನಿ ಮೋದಿಗೆ ಚೊಂಬು ತೋರಿಸಲು ಬಂದ ನಲಪಾಡ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮೋದಿ ಪಾಲ್ಗೊಂಡಿದ್ದರು.
ಇನ್ನೊಂದು ಅವಕಾಶ ಕೊಡಿ ಹಗಲು ರಾತ್ರಿ ದಣಿವರಿಯದೆ ಕೆಲಸ ಮಾಡ್ತೇನೆ – ಮೋದಿ!
ಸಮಾವೇಶದ ಬಳಿಕ ಮೋದಿ ಹಿಂದಿರುಗುತ್ತಿದ್ದರು, ಈ ವೇಳೆ ಮೇಖ್ರಿ ಸರ್ಕಲ್ ಬಳಿ ಚೊಂಬು ಪ್ರದರ್ಶನಕ್ಕೆ ಕಾಂಗ್ರೆಸ್ ಮುಖಂಡರು ಯತ್ನಿಸಿದ್ದರು. ಯುವ ಕಾಂಗ್ರೆಸ್ ಮುಖಂಡ ನಲಪಾಡ್ ನೇತೃತ್ವದಲ್ಲಿ ಮೋದಿಗೆ ಚೊಂಬು ತೋರಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ನಲಪಾಡ್ ಸೇರಿದಂತೆ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ನಲಪಾಡ್ ಚೊಂಬು ಪ್ರದರ್ಶನ ಮಾಡೋದು ತಪ್ಪಾ ಅಂತಾ ಆಕ್ರೋಶ ಹೊರಹಾಕಿದ ಘಟನೆ ಜರುಗಿದೆ.