ರಾಮನಗರ : ಹೆಸರು ಬದಲಾವಣೆ ಮಾಡುವುದರಿಂದ ಯಾರೂ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಅಲ್ಲದಿದ್ರೆ ದೆಹಲಿ ಅಂತ ಮಾಡಲಿ. ದೆಹಲಿ ಅಂತ ಮಾಡಿದ್ರೆ ಪ್ರಪಂಚದ ಮೂಲೆ ಮೂಲೆ ಇಂದ ಎಲ್ಲಾ ಬರ್ತಾರೆ. ರಾಮನಗರವನ್ನ ಬೆಂಗಳೂರು ಮಾಡೋದು ಬೇಡ,
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ʼನಲ್ಲಿದೆ ಉದ್ಯೋಗಾವಕಾಶ..! ಬೆಂಗಳೂರಿನಲ್ಲಿಯೇ ಪೋಸ್ಟಿಂಗ್
ದೆಹಲಿ ಅಥವಾ ದುಬೈ ಅಂತಾನೆ ಮಾಡಿ ಎಂದು ಕುಟುಕಿದ್ದಾರೆ. ಹೆಸರು ಬದಲಾವಣೆ ಮಾಡುವುದರಿಂದ ಯಾರೂ ಬರಲ್ಲ. ನೀವೇನು ಮೂಲಭೂತ ಸೌಕರ್ಯ ಕೊಡ್ತಿರಿ, ಅಭಿವೃದ್ಧಿ ಮಾಡ್ತೀರಿ ಅದರ ಮೇಲೆ ಜನ ಬರೋದು. ಅವರಿಗೆ ಬೇರೆ ಕೆಲಸ ಇಲ್ಲ, ಜನರ ಕೆಲಸ ಮಾಡಲ್ಲ. ಜನರ ಗಮನಸೆಳೆಯೋಕೆ ಹೀಗೆ ಮಾತನಾಡ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.