ಬೆಂಗಳೂರು: ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳ ಪ್ರಾಯೋಜಕತ್ವವನ್ನು ನಂದಿನ ಸಂಸ್ಥೆಯು ಪಡೆದುಕೊಂಡಿದೆ. ಅದರಂತೆ ನಂದಿನಿ ಬ್ರ್ಯಾಂಡ್ನ ಲೋಗೋವು ಟೂರ್ನಿಯಲ್ಲಿ ಸ್ಕಾಟ್ಲೆಂಡ್ ತಂಡ ಧರಿಸುವ ಜೆರ್ಸಿಯ ತೋಳಿನ ಮೇಲೆ ಇರಲಿದೆ. ಈಚೆಗಷ್ಟೇ ಸ್ಕಾಟ್ಲೆಂಡ್ ತಂಡ ಹೊಸ ಜರ್ಸಿಯನ್ನು ಅನಾವರಣ ಮಾಡಿದ್ದು, ನಂದಿನಿ ಲೋಗೋ ರಾರಾಜಿಸುತ್ತಿದೆ.
ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.
ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ… pic.twitter.com/CG7UhDtmLM
— Siddaramaiah (@siddaramaiah) May 16, 2024
ಇನ್ನೂ ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ನಂದಿನಿ ಸಂಸ್ಥೆಯು ಪರಿಚಯಿಸುತ್ತಿದೆ ಎಂದಿದ್ದಾರೆ.
BMTC Recruitment: ದ್ವಿತೀಯ PUC ಪಾಸಾದವರಿಗೆ BMTCಯಲ್ಲಿ ಬಂಪರ್ ಉದ್ಯೋಗ..! ಈಗಲೇ ಅರ್ಜಿ ಸಲ್ಲಿಸಿ
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ನಂದಿನಿ ರಾರಾಜಿಸಲಿದೆ. ಕನ್ನಡ ಕಂಗೊಳಿಸಲಿದೆ. ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮ ಎರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ಇದಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ, ಈಗ ಟಿ20 ವಿಶ್ವಕಪ್ ಪಂದ್ಯದಲ್ಲೂ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)