ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವರಾಜ್ ಕುಮಾರ್ ಅವರ ಜಾಹೀರಾತನ್ನು ಬಿಡುಗಡೆ ಮಾಡಿದರು.
ನಂದಿನಿ ಬ್ರ್ಯಾಂಡ್ಗೆ ರಾಯಭಾರಿಯಾಗಲು ನಟ ಶಿವರಾಜ್ಕುಮಾರ್ ಕೂಡ ಯಾವುದೇ ಸಂಭಾವನೆ ಪಡೆಯುತ್ತಿಲ್ಲ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ, ಇದು ನಮ್ಮ ಸರ್ಕಾರದ್ದು, ನಮ್ಮ ಪ್ರಾಡೆಕ್ಟ್. ನಾವು ನಮ್ಮ ರೈತರಿಗೋಸ್ಕರ ಯಾವಾಗಲು ಜೊತೆಯಲ್ಲಿರುತ್ತೇನೆ. ಇದು ನಮ್ಮ ತ್ಯಾಗ ಅಲ್ಲ ನಮ್ಮ ಕರ್ತವ್ಯ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.
ಈ ಹಿಂದೆ ದಿವಂಗತ ಪುನೀತ್ ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರು. ಇದೀಗ ಶಿವರಾಜ್ ಕುಮಾರ್ ಅವರನ್ನ ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ನಟ ಶಿವರಾಜ್ ಕುಮಾರ್ಗೆ ಹೂಗುಚ್ಚ ನೀಡಿ ಸನ್ಮಾನಿಸಲಾಯಿತು.