ಕೋಲ್ಕತ್ಕಾ:- 2024 ರಲ್ಲಿ ಮತ್ತೆ ಮೋದಿ ಪಿಎಂ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ, 2024 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದು 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ, 2026 ರಲ್ಲಿ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ.
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತುಷ್ಟೀಕರಣ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರವನ್ನು 2026 ರಲ್ಲಿ ಕೊನೆಗಾಣಿಸಲಾಗುವುದು ಎಂದು ಹೇಳಿದರು.
ಮಮತಾ ಬ್ಯಾನರ್ಜಿ ಅವರು ಸಿಎಎ ಜಾರಿಯನ್ನು ವಿರೋಧಿಸುತ್ತಿದ್ದಾರೆ. ಆದರೆ, ಅದರ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇದು ಪ್ರತಿಪಕ್ಷಗಳ ಕಾನೂನಿಗೆ ವಿರುದ್ಧದ ಬಲವಾದ ನಿಲುವನ್ನು ತೋರಿಸುತ್ತದೆ. ಅಕ್ರಮ ವಲಸಿಗರು ದೇಶದಲ್ಲಿ ಹೆಚ್ಚುತ್ತಿದ್ದಾರೆ. ಇದರ ತಡೆಗೆ ಸಿಎಎ ಜಾರಿಯೊಂದೇ ಕಠಿಣ ಕ್ರಮವಾಗಿದೆ. ವಿರೋಧಿಸುವ ಮಮತಾ ಅವರು ಅಕ್ರಮ ವಲಸಿಗರಿಗೆ ಗುರುತಿನ ಚೀಟಿಗಳನ್ನು ನೀಡುತ್ತಿದ್ದಾರೆ ಎಂದು ಶಾ ಆರೋಪಿಸಿದರು.
2024ರಲ್ಲಿ ನಡೆಯುವ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗುವುದು ಖಂಡಿತ. ಕಳೆದ ಬಾರಿಯೂ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರು ಆಯ್ಕೆಯಾಗಿದ್ದರು. ಈ ಬಾರಿಯೂ ಬಿಜೆಪಿಗೆ ಜನರು ಆಶೀರ್ವಾದ ಮಾಡಬೇಕು ಎಂದು ಕೋರಿದರು.