ವರ್ಷದ ಮೊದಲ ಸೂರ್ಯಗ್ರಹಣವು ಸೋಮವಾರ ಮೆಕ್ಸಿಕೊ, ಕೆನಡಾ ಹಾಗೂ ಅಮೆರಿಕದಂತಹ ದೇಶಗಳಲ್ಲಿ ಗೋಚರವಾಗಿದೆ.
ಶತಮಾನಗಳ ಬಳಿಕ ಮೊದಲ ಬಾರಿಗೆ ನ್ಯೂಯಾರ್ಕ್ನಲ್ಲಿ ಸಂಪೂರ್ಣವಾಗಿ ಗೋಚರವಾಗಿರುವ ಸೂರ್ಯಗ್ರಹಣ ಇದಾಗಿದೆ. ನಾಸಾ ಈ ಬಗೆಗಿನ ವಿಡಿಯೋ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ನಾಸಾ ತನ್ನ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ. ಸಂಪೂರ್ಣತೆಯ ಹಾದಿಯಾಗಿ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಮರೆಮಾಚುವ ದೃಶ್ಯಗಳು ಈ ಚಿತ್ರಪಟ ಹಾಗೂ ವೀಡಿಯೋದಲ್ಲಿ ಕಂಡುಬಂದಿದೆ. ಆದರೆ ಇದು ಭಾರತದಲ್ಲಿ ಗೋಚರವಾಗಿಲ್ಲ. ವಿಡಿಯೋ ಮುಖೇನ ಮಾತ್ರ ಸಂಪೂರ್ಣ ಸೂರ್ಯಗ್ರಹಣ ಕಣ್ತುಂಬಿಕೊಳ್ಳಬಹುದಾಗಿದೆ.
ನಾಸಾ ವೀಕ್ಷಕರಿಗಾಗಿ ತನ್ನ ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಅಧಿಕೃತ ನೇರ ಪ್ರಸಾರ ಸಹ ಹಮ್ಮಿಕೊಂಡಿತ್ತು. ಈ ಕುರಿತ ವೀಡಿಯೋಗಳನ್ನು ಶೇರ್ ಮಾಡಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)