ಬೆಂಗಳೂರು:- ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಭಾರತ ರಾಜ್ಯಗಳ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ಹೇಳಿದರು.
ಪ್ರೆಸ್ ಕ್ಲಬ್ದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ, ಪ್ರವಾಹ, ಮಳೆಹಾನಿ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದು, ಬೆಳೆ ನಾಶವಾಗಿದೆ, ಈಗ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದಕ್ಕಾಗಿ ಸಾಲಮನ್ನಾ ಆಗಲೇಬೇಕು ಎಂದು ಒತ್ತಾಯಿಸಿದರು.
ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ಕೇಂದ್ರ ಸರ್ಕಾರ, ಅದೇ ರೀತಿ ರೈತರ ಸಾಲ ಮನ್ನಾ ಆಗಬೇಕು. ಈ ಬಗ್ಗೆ ರೈತರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಡಿ.23 ರಂದು ಕೋರಿಕೆ ಪತ್ರ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.