ಬೆಂಗಳೂರು: ರಾಜ್ಯದಲ್ಲಿನ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮಧ್ಯಪ್ರವೇಶಿಸಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಆಗಮನಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಯಂದ್ರ ತರುಣ್ ಚುಗ್ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ದೇಶಾದ್ಯಂತ ಕರ್ನಾಟಕ ಒಳಗೊಂಡಂತೆ ಸಂಘಟನಾ ಪರ್ವ ನಡೀತಿದೆ. ಸದಸ್ಯತ್ವ ಅಭಿಯಾನ, ಸಕ್ರಿಯ ಸದಸ್ಯತ್ವ ಅಭಿಯಾನ, ಜಿಲ್ಲಾ, ಮಂಡಲ ಸದಸ್ಯರ ನೇಮಕ ಪ್ರಕ್ರಿಯೆ ನಡೀತಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬಂದಿದ್ದಾರೆ. ಪಕ್ಷದ ಕಚೇರಿಯಲ್ಲಿ ಇಡೀ ದಿನ ಸಂಘಟನಾ ಸಭೆಗಳು ನಡೆಯಲಿವೆ. ಇದು ಬಿಟ್ರೆ ರಾಜಕೀಯ ಮತ್ತೊಂದು ಏನೂ ಇಲ್ಲ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಅಭಿಪ್ರಾಯ ಸಂಗ್ರಹಕ್ಕೆ ಬಂದಿಲ್ಲ ಅವರು, ಆತರಹ ಇದ್ದಿದ್ರೆ ಉಸ್ತುವಾರಿ ರಾಧಾಮೋಹನ್ ದಾಸ್ ಅವರು ಬರ್ತಿದ್ರು. ತರುಣ್ ಚುಗ್ ಬಂದಿರೋದು ಸಂಘಟನೆ ದೃಷ್ಟಿಯಿಂದ ಮಾತ್ರ ಎಂದರು.
ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಇಂದು ವಿಚಾರಣೆಗೆ ಹಾಜರಾಗ್ತಾರಾ ಸಚಿವ ಜಮೀರ್..?
ಇದೇ ವೇಳೆ ಜಿಲ್ಲಾಧ್ಯಕ್ಷರುಗಳಿಂದ ಯತ್ನಾಳ್ ಉಚ್ಚಾಟನೆಗೆ ಮನವಿ ಕೊಡುವ ವಿಚಾರವಾಗಿ ಪ್ರತಿಕ್ರಿಯಿಸಿ,ಮನವಿ ಕೊಡಲು ಇದು ವೇದಿಕೆ ಅಲ್ಲ. ಇದು ಸಂಘಟನೆ ದೃಷ್ಟಿಯಿಂದ ನಡೆಯುತ್ತಿರುವ ಸಭೆ. ಜಿಲ್ಲಾಧ್ಯಕ್ಷರ ಸಮಸ್ಯೆಗಳು, ಅವರ ಅಭಿಪ್ರಾಯ ಹೇಳುವ ಕಾರ್ಯಕ್ರಮ ಇವತ್ತು ನಡೆಯುತ್ತಿಲ್ಲ ಎಂದರು.