ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದ ಮನೆಯಲ್ಲಿ ನೇಣು (Hangging) ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೇಗೂರು ಗ್ರಾಮದ ತನುಜ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು.
ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.