ಹರಿಯಾಣದ ಪಾಣಿಪತ್ ನಲ್ಲಿ ನ್ಯಾಷನಲ್ ಸ್ಪೋರ್ಟ್ಸ್ ಅಂಡ್ ಫಿಸಿಕಲ್ ಫಿಟ್ ನೆಸ್ ಬೋರ್ಡ್ ಮತ್ತು ಏಷಿಯನ್ ಫಿಸಿಕಲ್ ಫಿಟ್ ನೆಸ್ ಬೋರ್ಡ್ ಆಯೋಜಿಸಿದ್ದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಗುಂಡ್ಲುಪೇಟೆ ಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡದ ಆಟಗಾರರು ಪೈನಲ್ ಪಂದ್ಯದಲ್ಲಿ ತಮಿಳುನಾಡು ತಂಡದ ವಿರುದ್ಧ 15-13, 14-15, 15-12 ಅಂಕಗಳಿಂದ ಅಂತಿಮ ಗೆಲುವು ಸಾಧಿಸುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ತಂಡವೂ ಎರಡು ತಿಂಗಳ ಹಿಂದೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮೊದಲ,
ಸ್ಥಾನವನ್ನು ಗಳಿಸಿ ಪಾಣಿಪತ್ ನಲ್ಲಿ ಇಂದು ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿ ಇಲ್ಲಿಯೂ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.ಈ ಸಂದರ್ಭದಲ್ಲಿ ತಂಡದ ಮ್ಯಾನೇಜರ್ ಚಂದ್ರು ಲಕ್ಕೂರು ಹಾಗೂ ತರಬೇತುದಾರರಾದ ಮಲ್ಲುಸ್ವಾಮಿ ಮತ್ತು ಭರತ್ ಯು ಕುಮಾರ್ ಹಾಜರಿದ್ದರು.ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದ ತಂಡಕ್ಕೆ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಹೆಚ್.ಎಂ.ಗಣೇಶ್ ಪ್ರಸಾದ್ ಅವರು ತಮ್ಮ ಸಂಗಮ ಪ್ರತಿಷ್ಠಾನ ಮತ್ತು ಹೆಚ್.ಎಸ್.ಮಹದೇವಪ್ರಸಾದ್ ಫೌಂಡೇಶನ್ ವತಿಯಿಂದ 50 ಸಾವಿರ ರೂಪಾಯಿಗಳನ್ನು ನೀಡಿ ಶುಭ ಹಾರೈಸಿದರು. ಗೆಲುವು ಸಾಧಿಸಿದ ತಂಡಕ್ಕೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಹೆಚ್.ಎಂ.ಗಣೇಶ್ ಪ್ರಸಾದ್,

ಗುಂಡ್ಲುಪೇಟೆ ತಾಲೂಕಿನ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜು ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ, ಕೆಎಸ್ ನಾಗರತ್ನಮ್ಮ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಮತ್ತು ಆಡಳಿತ ಮಂಡಳಿ, ವಿವಿಧ ಸಂಘ ಸಂಸ್ಥೆಗಳು, ಕರ್ನಾಟಕ ರಾಜ್ಯದ, ಚಾಮರಾಜನಗರ ಜಿಲ್ಲೆಯ ಹಾಗೂ ನಮ್ಮ ಗುಂಡ್ಲುಪೇಟೆ ತಾಲೂಕಿನ ಜನತೆ ತಾಲೂಕಿನ, ಜಿಲ್ಲೆಯ ಹಾಗೂ ಕರ್ನಾಟಕ ರಾಜ್ಯದ ಕೀರ್ತಿ ಪತಾಕೆಯನ್ನು ಹಾರಿಸಿದ ನಮ್ಮ ತಂಡದ ಆಟಗಾರರಿಗೆ ಹೃದಯ ಪೂರ್ವಕವಾದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.