ಕಲಬುರ್ಗಿ:- ಜೈ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರಕವಿ ಕುವೆಂಪುರವರ 119 ನೇ ಜಯಂತೋತ್ಸವ ಕಾರ್ಯಕ್ರಮವನ್ನ ಕಲಬುರಗಿಯಲ್ಲಿ ಹಮ್ಮಿಕೊಳ್ಳಲಾಗಿತ್ತು..ನಗರದ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಶಾಸಕ ಅಲ್ಲಮ ಪ್ರಭು ಪಾಟೀಲ್ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡುತ್ತ ಕುವೆಂಪುರವರ ಸಂದೇಶಗಳು ಇಂದಿಗೂ ಮತ್ತು ಮುಂದಿನ ಪೀಳಿಗೆಗೂ ದಾರಿದೀಪ ಅಂತ ಹೇಳಿದ್ರು.
ಇದೇವೇಳೆ ಕಾರ್ಯಕ್ರಮ ಆಯೋಜಿಸಿದ್ದ ವೇದಿಕೆಯ ರಾಜ್ಯಾಧ್ಯಕ್ಷ ಸಚಿನ್ ಫರ್ತಾಬಾದ್ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಕುವೆಂಪು ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ರು.
ಕಾಂಗ್ರೆಸ್ ಮುಖಂಡ ನೀಲಕಂಠ ರಾವ್ ಮೂಲಗೆ ಹಾಗು ವಿವಿಧ ಮಠಾಧೀಶರು ಸೇರಿದಂತೆ ಅನೇಕರು ಜಯಂತೋತ್ಸವದಲ್ಲಿ ಪಾಲ್ಗೊಂಡಿದ್ದರು.
ಇದೇವೇಳೆ ಕುವೆಂಪುರವರ ಸಾಹಿತ್ಯದ ಹಲವು ಗೀತೆಗಳನ್ನು ಕಲಾವಿದ ಚನ್ನು ಪ್ರಸ್ತುತಪಡಿಸಿದ್ರು.