ಬೆಂಗಳೂರು: ಪತ್ರಿಕೋದ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆಂದು ಪರಿಗಣಿಸಲಾಗಿದೆ. ಪತ್ರಿಕಾ ಮಾಧ್ಯಮವು ನಮಗೆ ಈ ಜಗತ್ತಿನಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದರ ಕ್ಷಣ ಕ್ಷಣದ ಸುದ್ದಿಗಳನ್ನು ನೀಡುತ್ತದೆ. ನಾವು ಪ್ರತಿದಿನ ಪತ್ರಿಕೆಗಳನ್ನು ಓದುತ್ತೇವೆ ಅಥವಾ ಟಿ.ವಿ, ಸ್ಮಾರ್ಟ್ ಫೋನ್ಗಳಲ್ಲಿ ಸುದ್ದಿಗಳನ್ನು ನೋಡುತ್ತೇವೆ. ರಾಜಕೀಯ, ಕ್ರೀಡೆ, ವಿಜ್ಞಾನ, ಮನೋರಂಜನೆ ಹೀಗೆ ಎಲ್ಲಾ ಕ್ಷೇತ್ರದ ವಿಷಯಗಳ ಬಗ್ಗೆ ಪತ್ರಿಕಾ ಮಾಧ್ಯಮವು ನಮಗೆ ಸುದ್ದಿಯನ್ನು ನೀಡುತ್ತದೆ. ಆದರೆ ಇದು ಸುದ್ದಿ ಕೊಡುವುದಷ್ಟೇ ಅಲ್ಲ, ಮುಖ್ಯವಾಗಿ ಪತ್ರಿಕೋದ್ಯಮವು ಸಾರ್ವಜನಿಕರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ಕಾರ್ಯನಿವರ್ಹಿಸುತ್ತದೆ.
National Doctors’ Day 2024: ಜುಲೈ 1ರಂದೇ ʼʼರಾಷ್ಟ್ರೀಯ ವೈದ್ಯರ ದಿನʼʼವನ್ನು ಆಚರಿಸುವುದೇಕೆ.? ಇಲ್ಲಿದೆ ಮಾಹಿತಿ
1843ರ ಜುಲೈ 1ರಂದು ಕನ್ನಡದ ಮೊಟ್ಟಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭವಾಯಿತು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಸಂವಿಧಾನದ ನಾಲ್ಕನೇ ಅಂಗವಾಗಿ ಮಾಧ್ಯಮಗಳು ಕೆಲಸ ಮಾಡುತ್ತವೆ.
‘ಮಂಗಳೂರು ಸಮಾಚಾರ’ವೆಂಬ ಹೆಸರಿನಲ್ಲಿ ಪ್ರಾರಂಭಗೊಂಡ ಕನ್ನಡ ವಾರ ಪತ್ರಿಕೆಯಿಂದ ಕನ್ನಡ ಪತ್ರಿಕೋದ್ಯಮ ಚರಿತ್ರೆ ಕರ್ನಾಟಕದಲ್ಲಿ ಆರಂಭವಾಗುತ್ತದೆ.ಇಂದು ಪತ್ರಿಕಾರಂಗ ಬೃಹದಾಕಾರವಾಗಿ ನಡೆದು ಬಂದಿದ್ದರೂ ಡಿಜಿಟಲ್ ಮಾಧ್ಯಮಗಳ ಪ್ರಭಾವದ ಮಧ್ಯೆ ಅನೇಕ ಸವಾಲುಗಳು ಮತ್ತು ಸಮಸ್ಯೆಗಳನ್ನು ಎದುರಿಸುತ್ತಿದೆ. ಪತ್ರಿಕಾ ದಿನಾಚರಣೆಯ ದಿನದಲ್ಲಾದರೂ ಇವುಗಳ ಮೇಲೆ ಬೆಳಕು ಚೆಲ್ಲುವ ಕೆಲಸವಾಗಬೇಕು.
ಸರ್ಕಾರದ, ರಾಜಕೀಯ ನಾಯಕರು, ಪ್ರಭಾವಿಗಳ ಹಸ್ತಕ್ಷೇಪವಿಲ್ಲದೆ ಸ್ವತಂತ್ರವಾಗಿ ಮಾಧ್ಯಮಗಳು, ಪತ್ರಿಕೆ ಕಾರ್ಯನಿರ್ವಹಿಸುವಂತಾಗಬೇಕು ಎಂಬುದು ಎಲ್ಲರ ಆಶಯವಾಗಿರುತ್ತದೆ. ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ, ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡವರಿಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಆಡಳಿತ, ವಿಪಕ್ಷ ನಾಯಕರು, ಗಣ್ಯರು ಶುಭಾಶಯ ತಿಳಿಸಿದ್ದಾರೆ.
ರಾಷ್ಟ್ರೀಯ ಪತ್ರಿಕಾ ದಿನದ ಮಹತ್ವ:
ಪತ್ರಿಕಾ ಸ್ವಾತಂತ್ರ್ಯದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ. ಪತ್ರಿಕಾ ಸ್ವಾತಂತ್ರ್ಯವು ಅತೀ ಮುಖ್ಯವಾಗಿದೆ. ಇದು ಸರ್ಕಾರ ಮತ್ತು ನಾಗರಿಕರ ನಡುವಿನ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಲ್ಲದೆ, ಇದು ದೇಶದ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗೆ ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವಲ್ಲಿ ಪತ್ರಿಕಾ ಮಾಧ್ಯಮವು ವಹಿಸುವ ಪಾತ್ರದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ರಾಷ್ಟ್ರೀಯ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಅಲ್ಲದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅತ್ಯುತ್ತಮ ಕೆಲಸ ಮಾಡಿದ ಪತ್ರಕರ್ತರಿಗೂ ಈ ದಿನ ಗೌರವವನ್ನು ನೀಡಲಾಗುತ್ತದೆ.