ನಾನು ನೇರವಾಗಿ ಮಾತಾಡುವ ಮನುಷ್ಯ, ಹಳ್ಳಿಯ ಸೊಗಡಿನವನು, ನನ್ನ ಮಾತುಗಳಲ್ಲಿ ಹಳ್ಳಿ ಪದಗಳು ಬಂದು ಬಿಡುತ್ತವೆ. ದಯವಿಟ್ಟು ಕ್ಷಮಿಸಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ವರ್ತೂರು ಸಂತೋಷ್ ಗೆ ಕ್ಷಮೆಯಾಚಿಸಿದ್ದಾರೆ.
ನಾನು ಎಂದಿಗೂ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ ಎಂದು ಮಾತನಾಡಿದ್ದಾರೆ. ಬಳಿಕ ಜಗ್ಗೇಶ್, ಮೈಕ್ ಹಿಡಿದ ಮಾತಾಡುವಾಗ ನನ್ನ ಮಾತಿನಿಂದ ಯಾರಿಗಾದ್ರೂ ಬೇಜಾರಾಗಿದ್ದರೆ ಕ್ಷಮಿಸಿಬಿಡಿ. ನಿಮ್ಮ ತಂದೆಯ ವಯಸ್ಸಿನವನು ಅಂದುಕೊಂಡು ಕ್ಷಮಿಸಿ ಎಂದು ಮಾತನಾಡಿದ್ದಾರೆ.
ಸಿನಿಮಾವೊಂದರ ಪ್ರಚಾರದ ವೇಳೆ, ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ, ಬಿಗ್ ಬಾಸ್ ಸ್ಪರ್ಧಿ (Bigg Boss Kannada 10) ವರ್ತೂರು ಸಂತೋಷ್ ಅವರನ್ನು ‘ಕಿತ್ತೋದ್ ನನ್ ಮಗ’ ಎಂಬ ಪದ ಬಳಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಈಗ ಜಗ್ಗೇಶ್, ವರ್ತೂರು ಸಂತೋಷ್ (Varthur Santhosh) ಹೆಸರು ಹೇಳದೇ ಕ್ಷಮೆ ಕೇಳಿದ್ದಾರೆ.