Navratri 2024 Day 3: ನವರಾತ್ರಿ 3ನೇ ದಿನ ಚಂದ್ರಘಂಟಾ ಪೂಜೆ ಮಹತ್ವ ತಿಳಿಯೋಣ!

ದುರ್ಗಾಮಾತೆಯ ವೈವಾಹಿಕ ಅವತಾರವಾಗಿರುವ ಚಂದ್ರಘಂಟೆಯನ್ನು ನವರಾತ್ರಿಯ ಮೂರನೇ ದಿನ ಆರಾಧಿಸಲಾಗುತ್ತದೆ, ದುರ್ಗಾ ಮಾತೆಯ ರೌದ್ರಸ್ವರೂಪವಾಗಿಯೂ ಚಂದ್ರಘಂಟೆ ಕಂಡುಬರುತ್ತಾಳೆ. ದುಷ್ಟಶಕ್ತಿಗಳಿಗೆ ಸಿಂಹಸ್ವಪ್ನವಾಗಿಯೂ, ತನ್ನ ಭಕ್ತರನ್ನು ಪ್ರೀತಿಯಿಂದ ಸಲಹುವ ತಾಯಿ ಈಕೆ. ಚಂದ್ರಘಂಟಾ ಅಂದರೆ ಘಂಟೆಯಾಕಾರದ ಚಂದ್ರನನ್ನು ಮಸ್ತಕದಲ್ಲಿ ಧರಿಸಿದವಳು ಹಾಗೂ ಚಂದ್ರಘಂಟೆಯ ಮೂರನೇ ಕಣ್ಣು ತೆರೆದೇ ಇದ್ದು ಯಾವ ಸಮಯದಲ್ಲಿ ಆದರೂ ದುಷ್ಟ ಶಕ್ತಿಗಳ ನಿಗ್ರಹಕ್ಕೆ ಸಿದ್ಧಳಾಗಿರುವಂತೆ ಕಾಣುತ್ತಾಳೆ. ಚಂದ್ರಘಂಟೆಯನ್ನು ಚಂದ್ರಿಕಾ, ರಣಚಂಡಿ ಎಂದೂ ಕರೆಯುತ್ತಾರೆ. ಇವಳಿಗೆ ಹತ್ತು ಕೈಗಳಿದ್ದು, ಹತ್ತೂ ಕೈಗಳಲ್ಲಿ ಶಸ್ತ್ರಾಸ್ತ್ರವನ್ನು ಹಿಡಿದುಕೊಂಡು ಸಿಂಹವಾಹಿನಿಯಾಗಿ ರಾರಾಜಿಸುತ್ತಾಳೆ … Continue reading Navratri 2024 Day 3: ನವರಾತ್ರಿ 3ನೇ ದಿನ ಚಂದ್ರಘಂಟಾ ಪೂಜೆ ಮಹತ್ವ ತಿಳಿಯೋಣ!