ಬೆಂಗಳೂರು:- ನಕ್ಸಲ್ ಕ್ಯಾಪ್ಟನ್ ವಿಕ್ರಂ ಗೌಡ ಎನ್ಕೌಂಟರ್ ಕೇಸ್ ಗೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Delhi Air Pollution: ಮಿತಿ ಮೀರಿದ ವಾಯುಮಾಲಿನ್ಯ: ಉಸಿರಾಡುವ ಗಾಳಿ ಕೂಡ ವಿಷವಾಗುತ್ತಿದೆ
ಈ ಸಂಬಂಧ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್ಕೌಂಟರ್ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್ಕೌಂಟರ್ ಮಾಡಿದ್ದಾರೆ. ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ. ವಿಕ್ರಂ ಗೌಡ ಸಕ್ರಿಯರಾಗಿದ್ದ ಎಂದು ಪೊಲೀಸರು ಆತನನ್ನು ಹುಡುಕುತ್ತಿದ್ದರು ಎಂದರು
ವಿಕ್ರಂ ಗೌಡ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದು, ಆತನ ಮೇಲೆ ನಿಗಾ ಇಟ್ಟಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದಾರೆ. ಅವರಿಬ್ಬರೂ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಕೂಂಬಿಂಗ್ ನಡೆಸಲಾಯಿತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದಂತೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆ ಸಂದರ್ಭದಲ್ಲಿ ಪೊಲೀಸರಿಗೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡುವುದು ಅನಿವಾರ್ಯವಾಯಿತು ಎಂದು ತಿಳಿಸಿದರು.