ಬೆಂಗಳೂರು: ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದು, 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ದಾಖಲೆಯ 16ನೇ ಬಜೆಟ್ ಮಂಡಿಸಿದ ಸಿಎಂ, ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ.
ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ..!
ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದಾಗಿ ಹೇಳಿದ್ದಾರೆ. ಶರಣಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಸೇರ್ಪಡೆಗೊಳಿಸಲು, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ರೂಪಿಸುವುದಾಗಿ ತಿಳಿಸಿದರು.