ಪುಣೆ:- ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಜೊತೆಗೆ ಎನ್ಸಿಪಿ ಕೈಜೋಡಿಸುವುದಿಲ್ಲ ಎಂಬುದು ಸ್ಪಷ್ಟ. ಇದಕ್ಕೆ ವಿರುದ್ಧವಾದ ಯಾವುದೇ ಸಲಹೆಗೂ ನಮ್ಮ ಸಹಮತ ಇಲ್ಲ’ ಎಂದರು.
ಯಾರಾದರೂ ನಾವು ಬಿಜೆಪಿ ಬೆಂಬಲಿಸಬೇಕು ಎಂದು ಸಲಹೆ ನೀಡಿದ್ದರೆ ಅದು ನಮ್ಮ ನಿಲುವಿಗೆ ವಿರುದ್ಧವಾದುದು. ಈ ಸಲಹೆಯನ್ನು ಪಕ್ಷದ ಹಲವರು ಒಪ್ಪುವುದಿಲ್ಲ. ಈ ವಿಷಯದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ’ ಎಂದರು.
‘ಬೆಳಗಿನ ಜಾವ ಪ್ರಮಾಣವಚನ ಸ್ವೀಕರಿಸಿದ್ದ ಯಾರಾದರೂ ಬಿಜೆಪಿ ಬೆಂಬಲಿಸುವುದು ಪಕ್ಷದ ನೀತಿ ಎಂದು ಹೇಳಿರಬಹುದು. ಆ ವ್ಯಕ್ತಿಯನ್ನು ಗಂಭೀರವಾಗಿ ಪರಿಗಣಿಸಬಾರದು’ ಎಂದು ಅಜಿತ್ ಪವಾರ್ ಉಲ್ಲೇಖಿಸಿ ಹೇಳಿದರು.