ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸತತ ಮೂರನೇ ದಿನವೂ ಕೊರೋನಾ ಸೋಂಕಿತರ ಸಂಖ್ಯೆ 1000 ಕ್ಕೂ ಹೆಚ್ಚು ಇದೆ. ಜೊತೆಗೆ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಸಾವಿರದ ಗಡಿಯನ್ನು ದಾಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 1290 ಕೊರೋನಾ ಕೇಸ್ ಗಳು ಪತ್ತೆಯಾಗಿದ್ದರೆ, ಬೆಂಗಳೂರಿನಲ್ಲಿ 1041 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 232 ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಕೇಸ್ ಗಳ ಸಂಖ್ಯೆ 11,345 ಕ್ಕೆ ತಲುಪಿದೆ. ಕೊರೋನಾದಿಂದಾಗಿ ಬೆಂಗಳೂರಿನಲ್ಲಿ ಮೂವರು ಮೃತಪಟ್ಟಿದರೆ, ರಾಜ್ಯದಲ್ಲಿ ಒಟ್ಟು ಐವರು ಮೃತಪಟ್ಟಿದ್ಧಾರೆ. ಇದೇ ವೇಳೆ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ 1.60 ಏರಿಕೆಯಾಗಿದ್ರೆ ಸಾವಿನ ಪ್ರಮಾಣ 0.38 ಇದೆ. ಕೊರೋನಾ ಪಾಸಿಟಿವಿಟಿ ರೇಟ್ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಜಾರಿಕುರಿತು ನಿರ್ಧರಿಸುವ ಸಾಧ್ಯತೆ ಇದೆ.
