ಕೋಲಾರ:- ನಗರದ ಹೋಪ್ ಹೆಲ್ತ್ ಕೇರ್ ಆಸ್ಪತ್ರೆ ವೈದ್ಯರ ನಿರ್ಲ್ಯಕ್ಷದಿಂದ ಶ್ರೀನಿವಾಸಪುರ ತಾಲ್ಲೂಕಿನ ಕಮ್ಮತಮ್ಮಪಲ್ಲಿ ಗ್ರಾಮದ ವೆಂಕಟರಮಣಪ್ಪ ವ್ಯಕ್ತಿ ಸಾವನ್ನಪ್ಪಿದ ಘಟನೆ ಜರುಗಿದೆ.
Koppala: ಮಧ್ಯಾಹ್ನದ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥ!
ಹೊಟ್ಟೆ ನೋವು, ಹೊಟ್ಟೆ ಉಬ್ಬಸ ಎಂದು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ಹೊತ್ತಿನಲ್ಲಿ ರೋಗಿ ಸಾವನ್ನಪ್ಪಿದ್ದಾನೆ. ವೈದ್ಯರು ನೀಡಿದ್ದ ಇಂಜೆಕ್ಷನ್ ನಿಂದಲೇ ಸಾವನ್ನಿಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಮೃತ ವ್ಯಕ್ತಿಯ ಕುಟುಂಬಸ್ಥರಿಂದ ಆಸ್ಪತ್ರೆಯಲ್ಲಿನ ಕಿಟಕಿ ಗಾಜು ಹೊಡೆದು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ವ್ಯದ್ಯರ ಮೇಲೆ ಮೃತರ ಸಂಬಂಧಿಕರು ಹಲ್ಲೆಗೆ ಮುಂದಾಗಿದ್ದರು.
ಸ್ಥಳಕ್ಕೆ ಕೋಲಾರ ನಗರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲಿಸಿದರು. ವೈದ್ಯರ ಮೇಲೆ ಹಲ್ಲೆಗೆ ಮುಂದಾದ ಹಿನ್ನೆಲೆ ಹೋಪ್ ಆಸ್ಪತ್ರೆ ವೈದ್ಯ ಯಶವಂತ್ ಅವರಿಂದ ದೂರು ನೀಡಲಾಗಿದೆ. ಕೋಲಾರ ನಗರ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.