ಹುಬ್ಬಳ್ಳಿ:– ನೇಹಾ ಹೀರೆಮಠ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪಾಗಲ್ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಬರೋಬ್ಬರಿ 10 ಬಾರಿ ಚುಚ್ಚಿ ಕೊಲೆ ಮಾಡಿದ್ದಾನೆ. ಕೊಲೆಯಾದ ಒಂದೇ ಗಂಟೆಯಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಇನ್ನು ಈ ಪ್ರಕರಣದ ಬಗ್ಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಪ್ರತಿಕ್ರಿಯಿಸಿದ್ದು, ಘಟನೆ ನಡೆದ ಒಂದು ಗಂಟೆಯಲ್ಲಿ ಆರೋಪಿಯನ್ನು ಅರೆಸ್ಟ್ ಮಾಡಿದ್ದೇವೆ. ಇಂದು 4.45 ಕ್ಕೆ ಬಿವಿಬಿ ಕಾಲೇಜ್ ಗೆ ನುಗ್ಗಿ ಚಾಕು ಇರದಿದ್ದಾನೆ. ಫಯಾಜ್ ನಾಲ್ಕೈದು ಬಾರಿ ನೇಹಾಗೆ ಚಾಕು ಇರದಿದ್ದಾನೆ. ಚಾಕು ಇರಿದು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ.ಆದ್ರೆ, ಒಂದು ಗಂಟೆಯಲ್ಲಿ ಆತನನ್ನ ಅರೆಸ್ಟ್ ಮಾಡಲಾಗಿದೆ. ಇನ್ನು ನೇಹಾಳನ್ನ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ಆದ್ರೆ ನೇಹಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದರು.
ಆರೋಪಿ ಫಯಾಜ್ ಪ್ರಕಾರ ನೇಹಾ ಇತ್ತೀಚಿಗೆ ಫಯಾಜ್ ನನ್ನ ಅವೈಡ್ ಮಾಡಿದ್ದಳು. ಮೊದಲು ಇಬ್ಬರು ಪರಿಚಯದಿಂದಲೇ ಇದ್ದರು. ಇತ್ತೀಚೆಗೆ ಅವೈಡ್ ಮಾಡಿರುವ ಕಾರಣಕ್ಕೆ ಕೊಲೆ ಮಾಡಿದ್ದಾನೆ. ಇದು ಆರೋಪಿ ವರ್ಷನ್ ಅಗಿದೆ. ನಾವು ತಂದೆ ತಾಯಿ ಬಳಿಯೂ ಮಾಹಿತಿ ಪಡೆಯುತ್ತೇವೆ ಎಂದು ಹೇಳಿದರು