ಕನ್ನಡದಲ್ಲಿ ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ನಟಿಸಿ, ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದ ಲಿಯೋನಿಲ್ಲಾ ಶ್ವೇತಾ ಡಿಸೋಜಾ (Leonilla Shweta D’Souza) ಇದೀಗ ಮತ್ತೆ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುತ್ತಿರುವ ನೆಲ್ಸನ್ ಚಿತ್ರದಲ್ಲಿ ಲಿಯೋನಿಲ್ಲಾ ಶ್ವೇತಾ ಡಿಸೋಜಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೊಂದು ಹೊಸ ರೀತಿಯ ಪಾತ್ರ ಎನ್ನಲಾಗುತ್ತಿದೆ.
ಗೊಂಬೆಗಳ ಲವ್ ಮೂಲಕ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್ ಕುಮಾರ್ (Arun Kumar) ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ (Nelson) ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸ್ತಿದೆ. ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಆಂಗ್ರಿ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಇಂದು ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.
ಟೈಗರ್ ಹವಾ ಆಗಲೂ ಇತ್ತು ಈಗಲೂ ಇರುತ್ತೇ.. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ನಿಮ್ಮ ಟೀಸರ್ ಲಾಂಚ್ ಮಾಡಲು ನಿಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಟೀಸರ್ ಬಗ್ಗೆ ಏನೂ ಹೇಳೋದು. ಎಲ್ಲವೂ ಎಕ್ಸ್ಟ್ರಾಡಿನರಿಯಾಗಿದೆ. ಮೇಕಿಂಗ್, ಗೆಟಪ್ ಸೂಪರ್. ಸಬ್ಜೆಕ್ಟ್ ಬೇರೆ ತರ ಇದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿದೆ ಎಂದರು. ನಟ ವಿನೋದ್ ಪ್ರಭಾಕರ್ ಮಾತನಾಡಿ, ಉಪೇಂದ್ರ (Upendra) ಅಣ್ಣ ಟೀಸರ್ (Teaser) ನೋಡಿ ತುಂಬಾ ಖುಷಿಪಟ್ಟರು. ದರ್ಶನ್ ಸರ್ ಕೂಡ ಟೀಸರ್ ನೋಡಿದರು. ಈ ತರಹದ ಒಂದು ಸಿನಿಮಾ ಮಾಡಲು ಧೈರ್ಯ ಬೇಕು. ಶ್ರೀರಾಮ್ ಸರ್ ನಿಮಗೆ ಧನ್ಯವಾದ. ನಿಮ್ಮ ಮೇಲೆ ನಮಗೆ ಕಾನ್ಫಿಡೆನ್ಸ್ ಇದೆ. ಅರುಣ್ ಕುಮಾರ್ ಅವರು ಬಹಳಷ್ಟು ಫ್ಯಾಷನ್ ಇರುವ ವ್ಯಕ್ತಿ. ಭರತ್ ಸರ್ ವಂಡರ್ ಫುಲ್ ಮ್ಯೂಸಿಕ್. ಸಿನಿಮಾ ಬಗ್ಗೆ ಮುಂದೆ ಮಾತಾಡ್ತೀನಿ. ತೆರೆಹಿಂದೆ ಬಹಳಷ್ಟು ಜನ ಕೆಲಸ ಮಾಡಿದ್ದೀರಿ ಎಂದರು.