ನವದೆಹಲಿ:– ಕುಸ್ತಿಪಟುಗಳ ಬಗ್ಗೆ ಮಾತನಾಡಬೇಡಿ ಎಂದು ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಸೂಚನೆ ನೀಡಿದೆ.
ಹರಿಯಾಣ ವಿಧಾನಸಭಾ ಚುನಾವಣೆಗು ಮುನ್ನ ವಿನೇಶ್, ಪುನಿಯಾ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಈ ವಿಚಾರವಾಗಿ ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಇಬ್ಬರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡದಂತೆ ಬ್ರಿಜ್ ಭೂಷಣ್ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ಬಂಧನದ ಅವಧಿ ಮುಕ್ತಾಯ, ಜಾಮೀನು ಅರ್ಜಿ ಸಲ್ಲಿಸ್ತಾರಾ ದರ್ಶನ್!
ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರು ಕುಸ್ತಿಯಲ್ಲಿ ಹೆಸರು ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿದ ನಂತರ ಅವರ ಹೆಸರುಗಳು ಅಳಿಸಿ ಹೋಗಲಿವೆ. ತಾವು ವಿಧಾನಸಭೆ ಚುನಾವಣೆಯಲ್ಲಿ ಗೆದ್ದುಬಿಡುತ್ತೇವೆ ಎಂದು ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ಭಾವಿಸಿದ್ದರೆ ಅದು ತಪ್ಪು. ಅವರು ಹರ್ಯಾಣದ ಯಾವುದೇ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದರೂ, ಬಿಜೆಪಿಯ ಸಣ್ಣ ಅಭ್ಯರ್ಥಿ ಕೂಡ ಅವರನ್ನು ಸೋಲಿಸುತ್ತಾರೆ ಎಂದು ಸಿಂಗ್ ಹೇಳಿದ್ದರು.
ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾಗ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್, ಇದು ಕಾಂಗ್ರೆಸ್ ಪಕ್ಷವು ತಮ್ಮ ವಿರುದ್ಧ ನಡೆಸಿದ್ದ ಸಂಚು. ಇದಕ್ಕೆ ಫೋಗಟ್ ಹಾಗೂ ಪೂನಿಯಾ ಅವರ ಕಾಂಗ್ರೆಸ್ ಸೇರ್ಪಡೆ ಸಾಕ್ಷಿ ಎಂದು ಹೇಳಿದ್ದರು.
ಪ್ರತಿಭಟನೆ ಆರಂಭಿಸಿದ ದಿನವೇ, ಇದರ ಹಿಂದೆ ಕಾಂಗ್ರೆಸ್ ಪಾತ್ರವಿದೆ ಎಂದು ಹೇಳಿದ್ದೆ. ಈಗ ಅದೇ ನಿಜವಾಗಿದೆ. ಕಾಂಗ್ರೆಸ್ ಸಂಚಿಗೆ ವಿನೇಶ್ ಮತ್ತು ಬಜರಂಗ್ ದಾಳವಾಗಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷ ಇಂತಹ ಕೆಲಸಗಳನ್ನು ಮಾಡುತ್ತಲೇ ಇರುತ್ತದೆ. ಇದಕ್ಕಾಗಿ ಭೂಪಿಂದರ್ ಹೂಡಾ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕುಟುಂಬ ಕುಸ್ತಿಪಟುಗಳನ್ನು ದಾಳವಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದ್ದರು.